ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್*

Kuntinath
ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್*
WhatsApp Group Join Now
Telegram Group Join Now

*ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್*
ಬೆಂಗಳೂರು, ಮಾ.30: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರಕಾರ ಶನಿವಾರ ಸಂಜೆ ನೇಮಿಸಿದ್ದು,ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಕೊಪ್ಪಳದಲ್ಲಿ ಜಿಲ್ಲಾಧಿಕಾರಿಗಳಾಗಿ,ಯಾದಗಿರಿ, ಬೆಳಗಾವಿ,ವಿಜಯಪುರ ಜಿಲ್ಲೆಗಳಲ್ಲಿ ಜಿಪಂ ಸಿಇಒ ಅವರಾಗಿ ಕರ್ತವ್ಯ ನಿರ್ವಹಿಸಿದ್ದರು.

WhatsApp Group Join Now
Telegram Group Join Now
Share This Article