ರಾಜ್ಯದ ಮತ್ತೊಬ್ಬ ಬಿಜೆಪಿ ಸಂಸದಗೆ ಟಿಕೆಟ್ ಮಿಸ್: ಚಿತ್ರದುರ್ಗಕ್ಕೆ ಹೊಸ ಅಭ್ಯರ್ಥಿ ಘೋಷಣೆ

khushihost
WhatsApp Group Join Now
Telegram Group Join Now

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಬಿಜೆಪಿ 7ನೇ ಪಟ್ಟಿಯಲ್ಲಿ ಅಮರಾವತಿ ಕ್ಷೇತ್ರದಿಂದ ನವನೀತ್ ರಾಣಾ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ.

ಚಿತ್ರದುರ್ಗ ಹಾಲಿ ಸಂಸದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಮಾದರ ಚೆನ್ನಯ್ಯ ಸ್ವಾಮೀಜಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳಿಗೂ ತೆರೆ ಬಿದ್ದಿದೆ.

ಇದರೊಂದಿಗೆ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಹಾಲಿ ಸಂಸದರಾದ ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲು, ಅನಂತ್ ಕುಮಾರ್ ಹೆಗಡೆ, ಸಂಗಣ್ಣ ಕರಡಿ, ಡಿ.ವಿ. ಸದಾನಂದ ಗೌಡ ಸೇರಿದಂತೆ ಘಟಾನುಘಟಿಗಳಿಗೆ ಟಿಕೆಟ್ ಕೈತಪ್ಪಿದೆ. ಇದೀಗ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೂ ಬಿಜೆಪಿ ಟಿಕೆಟ್ ಮಿಸ್ ಆಗಿದೆ.

WhatsApp Group Join Now
Telegram Group Join Now
Share This Article