ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಕೊಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ
*ಬೆನಕನಹೊಳಿ, ಕೇರಿಮಾಸ್ತಿಹೊಳಿ, ನರಸಿಂಗಪೂರ, ಮಜತಿ, ಮಾನಗಾಂವ ಗ್ರಾಮಗಳಲ್ಲಿ ಮತಯಾಚನೆ
ಬೆಳಗಾವಿ: ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವಂತಹ ಕಾಂಗ್ರೆಸ್ ಪಕ್ಷ. ಹೀಗಾಗಿ ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು.
ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಬೆನಕನಹೊಳಿ, ಕೇರಿಮಾಸ್ತಿಹೊಳಿ, ನರಸಿಂಗಪೂರ, ಮಜತಿ, ಮಾನಗಾಂವ ಗ್ರಾಮಗಳಲ್ಲಿ ಮತಯಾಚಿಸಿ ನಂತರ ಮಾತನಾಡಿದ ಅವರು, ಮತಕ್ಷೇತ್ರದಲ್ಲಿ ಈಗಾಗಲೇ ನಮ್ಮ ತಂದೆಯವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ. ಅಲ್ಲದೇ ಕಳೆದ 15 ವರ್ಷಗಳ ಅವಧಿಯಲ್ಲಿ ಮತಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲಾ-ಕಾಲೇಜುಗಳನ್ನು ನಿರ್ಮಿಸಿ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹತ್ತಾರು ಅಭಿವೃದ್ದಿ ಕಾರ್ಯಗಳನ್ನು ಈ ಕ್ಷೇತ್ರದಲ್ಲಿ ಮಾಡಲು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡ ನನಗೆ ಆಶೀರ್ವಾದ ಮಾಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಸದಾ ನಿಮ್ಮ ಕಷ್ಟ, ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದ ಅವರು, ಹಿಂದಿನ ಅವಧಿಯಲ್ಲಿ ಬಿಜೆಪಿಯಿಂದ ಜೊಲ್ಲೆ ಸಂಸದರಾಗಿ ಆಯ್ಕೆಯಾಗಿ ಬಂದರೂ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇಲ್ಲಿಯ ಪರಿಸ್ಥಿತಿ ನೋಡಿದರೆ ರೈತರ ಬಗ್ಗೆ ಕಾಳಜಿ ಇಲ್ಲದ ಸಂಸದರಾಗಿದ್ದಾರೆ. ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಪ್ರತಿಯೊಂದು ಕುಟುಂಬಗಳಿಗೆ ನಾಲ್ಕರಿಂದ ಐದು ಸಾವಿರ ಹಣ ಉಳಿತಾಯವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಂದು ಮನೆಯ ಗೃಹಿಣಿಯರು 2000 ಪಡೆದುಕೊಳ್ಳುತ್ತಿದ್ದಾರೆ. ವಿಧ್ಯುತ್ ಅನ್ನು ಉಚಿತವಾಗಿ ಪಡೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯದಲ್ಲಿ 5 ಕೆಜಿ ಅಕ್ಕಿ 5 ಕೆ.ಜಿ ಗೆ ಹಣವನ್ನು ಪಡೆಯುತ್ತಿದ್ದಾರೆ ಎಂದರು.
ಶೈಕ್ಷಣಿಕ ಸೇರಿದಂತೆ ಕ್ರೀಡಾ ಪಟುಗಳಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ದಿಂದ ಸಹಾಯ-ಸಹಕಾರ ಮಾಡಲಾಗಿದೆ. ನಿಮ್ಮ ಮನೆ ಮಗಳನ್ನು ಮತದಾರರು ಸಹಕರಿಸಬೇಕು. ಈ ಕ್ಷೇತ್ರದಿಂದ ಗೆಲ್ಲಲು ಶಕ್ತಿ ತುಂಬಬೇಕು. ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದವರು ಕಾಂಗ್ರೆಸ್, ದೇಶಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ಮಾಡಿದವರು ಕಾಂಗ್ರೆಸ್ . ಹೀಗಾಗಿ ಜಿಲ್ಲೆ ಸೇರಿದಂತೆ ದೇಶದ ಅಭಿವೃದ್ಧಿಗೆ ಕಾರಣವಾಗಿರುವ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಟ್ಟು ನನ್ನ ಗೆಲುವಿಗೆ ಕಾರ್ಯಕರ್ತರು ಮುಂದಾಗಬೇಕು. ಸಿಎಂ ಸಿದ್ದರಾಮಯ್ಯನವರ ಹಾಗೂ ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿಯವರ ಆಶೀರ್ವಾದದಿಂದ ನನ್ನಗೆ ಲೋಕಸಭೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಆದಕಾರಣ ತಾವಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಗ್ರಾಮಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಮಹಿಳೆಯರು ಹೂ ಮಾಲೆ ಹಾಕಿ ಸನ್ಮಾನಿಸಿದರು.
ಈ ವೇಳೆ ಅರ್ಜುನ್ ಘಸ್ತಿ, ಬಸು ದರನತಿ, ಸುರೇಶ ನಾಯ್ಕ, ಸತೀಶ್ ನಾಯ್ಕ್, ಮಾರುತಿ ಘಸ್ತಿ, ಕಡೇಶ್ ಮೇಕಾಲಿ, ಕಮಲವ್ವ ವಾಲೀಕಾರ, ಯಲ್ಲವ್ವ ಕೋಳಿ, ಬಸು ವಾಲಿಕರ್, ಬಾಳೇಶ ಮಾವನೂರೆ, ರಾಮಗೊಂಡ ಸೇರಿದಂತೆ ವಿವಿಧ ಗ್ರಾಮದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.