ಮರಾಠ‌ ಸಮುದಾಯದಿಂದ ಕಾಂಗ್ರೆಸ್ ಗೆ ಭಾರಿ ಬೆಂಬಲ*

Kuntinath
WhatsApp Group Join Now
Telegram Group Join Now

* *ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಸಚಿವರಿಂದ ಮತಯಾಚನೆ*

* *ಮರಾಠ‌ ಸಮುದಾಯದಿಂದ ಕಾಂಗ್ರೆಸ್ ಗೆ ಭಾರಿ ಬೆಂಬಲ*

*ಬೆಳಗಾವಿ:* ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಡಗಾಂವ ಹಾಗೂ ಪೀರನವಾಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಪ್ರಚಾರ ನಡೆಸಿದರು.

ವಡಗಾಂವನ ಅನುಸೂಯ ಸಭಾಂಗಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಉತ್ತಮ ಅಭ್ಯರ್ಥಿ ಆಗಿದ್ದು, ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಸಾಮರ್ಥ್ಯ ಹೊಂದಿದ್ದಾನೆ ಎಂದು ಹೇಳಿದರು.

ಬಳಿಕ ಪೀೀರನವಾಡಿಯಲ್ಲಿ ಮತಯಾಚಿಸಿದ ಸಚಿವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬಡಜನರಿಗೆ ಸಾಕಷ್ಟು ಅನುಕೂಲ ಆಗಿದೆ. ಪೀರನವಾಡಿ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ, ಈ‌ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ನಿರೀಕ್ಷಿಸಲಾಗಿದೆ ಎಂದು‌ ಹೇಳಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಉತ್ತಮ ವಾತಾವರಣವಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು. ಈ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬೆಂಬಲ ವ್ಯಕ್ತವಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ಡಗೆ, ಪ್ರದೀಪ್.ಎಂ.ಜೆ.ಅಮೂಲ ದೇಸಾಯಿ, ಮಹಾದೇವ ಗಡ್ಕರಿ, ಸಾಕ್ಷಿ ಕಣಬರಕರ, ಮಾಧುರಿ ಮಿರ್ಜೆ, ಮಹೇಶ್ ಪಾಟೀಲ್, ಸಚಿನ್ ಗೊರ್ಲೆ, ಪೀರಾಜಿ ಸೂಳಗೆಕರ್, ಪ್ರಮೋದ್ ಪಾಟೀಲ್, ವಿಠಲ್ ಸಾಂಬ್ರೇಕರ್, ಮಲ್ಲಿಕಾರ್ಜುನ ಕೊಡಗೂರು,ಮಹಾಂತೇಶ್ ಕರಿಗಾರ್ , ರಾಜು ಕಡೋಲ್ಕರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article