ಜೈನ ಸಮಾಜದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ
ಬೆಳಗಾವಿ.ಏ.14: ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ ಜಿತೋ ಸಂಸ್ಥೆಯ ವತಿಯಿಂದ ಜೈನ ಸಮಾಜದ ವಿದ್ಯಾರ್ಥಿಗಳಿಗಾಗಿ ಉನ್ನತ ಶಿಕ್ಷಣಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ ಜಿತೋ ಶಿಕ್ಷಣ ನೆರವು ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯಡಿ ದ್ವಿತೀಯ ಪಿಯುಸಿ ಉತ್ತಿರ್ಣ ಹೊಂದಿದ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.ಅದರಂತೆ ಜಿತೋ ಯುಪಿಎಸ್‌ಸಿ ಪರಿಕ್ಷೆಗಾಗಿ ಉಚಿತ ತರಬೇತಿ ನೀಡುವ ಯೋಜನೆಯನ್ನು ಸಹ ಜಾರಿಗೆ ತಂದಿದ್ದು ಜೈನ ಸಮಾಜದ ಪದವಿಧರರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.
ಈ ಎರಡು ಯೋಜನೆಗಳ ಸಮಗ್ರ ಮಾಹಿತಿ ನೀಡಲು ಇದೇ ಏಪ್ರಿಲ 17 ರಂದು ಬೆಳಿಗ್ಗೆ 11 ಗಂಟೆಗೆ ಹಿಂದವಾಡಿಯ ಗೋಗಟೆ ಮಹಾವಿದ್ಯಾಲಯದಲ್ಲಿನ ಕೆ.ಕೆ.ವೇಣುಗೋಪಾಲ ಸಭಾಗೃಹದಲ್ಲಿ ಮಾರ್ಗದರ್ಶನ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಐಪಿಎಸ್ ಅಧಿಕಾರಿ ಜಿನೇಂದ್ರ ಖನಗಾಂವಿ, ಐಆರ್‌ಎಸ್ ಅಧಿಕಾರಿ ಅಜಯಕುಮಾರ ಜೈನ ಇವರು ಮಾರ್ಗದರ್ಶನ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿತೋ ಸಂಸ್ಥೆಯ ಹಿರಿಯ ಪದಾಧಿಕಾರಿಗಳು ಸಹ ಉಪಸ್ಥಿತರಿದ್ದು ಅವರು ಸಹ ಜೈನ ಸಮಾಜದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕುಂತಿನಾಥ ಕಲಮನಿ 9480448108 ಭೂಷಣ ಮೊಹಿರೆ 7022696149 ಇವರನ್ನು ಸಂಪರ್ಕಿಸಲು ಕೋರಲಾಗಿದೆ.
****************